ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯು ಕೇವಲ ಗಡಿ ಕಾಯುವ ಪಡೆಯಾಗಿ ಉಳಿಯದೆ, ಇಸ್ಲಾಂ ಧರ್ಮದ ರಕ್ಷಕನಾಗಿ ಕಾರ್ಯನಿರ್ವಹಿಸಲಿದೆ ಎಂದು ಪಾಕ್ ರಕ್ಷಣಾ ಪಡೆಗಳ ಮುಖ್ಯಸ್ಥ (CDS), ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್(Asim Munir) ಹೇಳಿದ್ದಾರೆ. ಅಲ್ಲದೆ, ದೇಶದ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಧಾರ್ಮಿಕ ಸ್ವರೂಪ ನೀಡುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.