ಜೆಫ್ರಿ ಎಡ್ವರ್ಡ್ ಎಪ್ಸ್ಟೀನ್ (1953-2019) ಅಮೆರಿಕದ ಶ್ರೀಮಂತ ಹಣಕಾಸು ಉದ್ಯಮಿ ಮತ್ತು ಲೈಂಗಿಕ ಅಪರಾಧಿ. ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿ, ಕಳ್ಳಸಾಗಾಣೆ ಮಾಡಿದ ಆರೋಪ ಆತನ ಮೇಲಿದೆ. 2008ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಮತ್ತು 2019ರಲ್ಲಿ ಮತ್ತೆ ಬಂಧನಕ್ಕೊಳಗಾಗಿ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡನು. ಬಿಲ್ ಕ್ಲಿಂಟನ್, ಡೊನಾಲ್ಡ್ ಟ್ರಂಪ್, ಪ್ರಿನ್ಸ್ ಆಂಡ್ರ್ಯೂ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳೊಂದಿಗೆ ಈ ಎಪ್ಸ್ಟೀನ್ ಸಂಪರ್ಕ ಹೊಂದಿದ್ದ ಆದರೆ, ಅವರ ಮೇಲೆ ಯಾವುದೇ ನೇರ ಆರೋಪಗಳಿಲ್ಲ, (ಏಜೆನ್ಸೀಸ್).