ಹೊಸ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ಕನ್ನಡ ಪಾಠಶಾಲೆ ಪುನರಾರಂಭ/kathar

ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (ಓಖಕಿ) ನಡೆಸಿಕೊಂಡು ಬರುತ್ತಿರುವ ಕನ್ನಡ ಪಾಠಶಾಲೆಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಿದೆ.
ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (ಓಖಕಿ) ನಡೆಸಿಕೊಂಡು ಬರುತ್ತಿರುವ ಕನ್ನಡ ಪಾಠಶಾಲೆಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಿದೆ.
Published on
ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (ಓಖಕಿ) ನಡೆಸಿಕೊಂಡು ಬರುತ್ತಿರುವ ಕನ್ನಡ ಪಾಠಶಾಲೆಯನ್ನು ಹೊಸ ಆಶಯ ಹಾಗೂ ನೂತನ ಕಾಯಕಲ್ಪದೊಂದಿಗೆ ಪುನರಾರಂಭಿಸಿದೆ.
ಶಿಕ್ಷಕರು ಮತ್ತು ಪೋಷಕರಿಗೆ ವಿಶೇಷ ತರಬೇತಿ ಕಾರ್ಯಾಗಾರ
ರಾಜ್ಯ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮ ೆಕನ್ನಡ ಪಾಠ ಶಾಲೆಯ ಶಿಕ್ಷಕರು ಹಾಗೂ ಪೋಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಮಕ್ಕಳ ವಯಸ್ಸು ಮತ್ತು ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಕನ್ನಡವನ್ನು ಪರಿಣಾಮಕಾರಿಯಾಗಿ ಬೋಧಿಸುವ ವಿಧಾನಗಳು, ಪಠ್ಯಕ್ರಮವನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಕ್ರಮಗಳು ಹಾಗೂ ಮಕ್ಕಳಲ್ಲಿ ಕನ್ನಡ ಕಲಿಕೆಯ ಆಸಕ್ತಿ ಹೆಚ್ಚಿಸುವ ಬೋಧನಾ ತಂತ್ರಗಳ ಕುರಿತು ಅವರು ಮಾರ್ಗದರ್ಶನ ನೀಡಿದರು.
ಶಿಕ್ಷಕರ ದಿನಾಚರಣೆಯಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭ
ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಡಾ. ಪುರುಷೋತ್ತಮ ಬಿಳಿಮಲೆ ಅವರ ಸಮ್ಮುಖದಲ್ಲಿ ಕನ್ನಡ ಪಾಠಶಾಲೆಯ ಪುನರಾರಂಭವನ್ನು ಅಧಿಕೃತವಾಗಿ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡದ ಸೇವೆಯನ್ನು ಸ್ವಯಂಪ್ರೇರಿತವಾಗಿ ಸಲ್ಲಿಸುತ್ತಿರುವ ಶಿಕ್ಷಕರ ಕೊಡುಗೆಯನ್ನು ಬಿಳಿಮಲೆ ಶ್ಲಾಘಿಸಲಾಯಿತು.
ಕನ್ನಡ ಪಾಠ ಶಾಲೆಯನ್ನು ಪುನರಾರಂಭಿಸುವ ಈ ಮಹತ್ವದ ಕಾರ್ಯವನ್ನು ಸಾಕಾರಗೊಳಿಸಲು ಕರ್ನಾಟಕ ಸಂಘ ಕತಾರ್‌ನ ನಿರ್ವಹಣಾ ಸಮಿತಿಯ ಸದಸ್ಯರು ವಿಶೇಷ ಆಸಕ್ತಿ, ಸಮಯ ಮತ್ತು ಶ್ರಮವನ್ನು ವಹಿಸಿ, ನಿರಂತರವಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಕನ್ನಡದ ಮೇಲಿನ ಕಾಳಜಿ ಹಾಗೂ ಮುಂದಿನ ಪೀಳಿಗೆಗೆ ಕನ್ನಡವನ್ನು ತಲುಪಿಸುವ ಬದ್ಧತೆಯಿಂದ ಸಮಿತಿಯ ಈ ಪ್ರಯತ್ನ ಮಹತ್ವದ್ದಾಗಿದೆ ಎಂದು ಹೇಳಿದರು.
ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಮಾತನಾಡಿ
ಮಕ್ಕಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸುವುದರ ಜೊತೆಗೆ, ಎಲ್ಲ ಮಕ್ಕಳು ಸಮಾನರು ಎಂಬ ಭಾವನೆಯನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ವತಿಯಿಂದ ಕನ್ನಡ ಪಾಠಶಾಲೆಯ ಎ್ಲ ಮಕ್ಕಳಿಗೂ ಒಂದೇ ರೀತಿಯ ಟಿ-ಶರ್ಟ್‌ಗಳು ಹಾಗೂ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಈ ಮೂಲಕ ಮಕ್ಕಳಲ್ಲಿ ಒಗ್ಗಟ್ಟು, ಸಮಾನತೆ ಹಾಗೂ ಕನ್ನಡದೊಂದಿಗೆ ಆತ್ಮೀಯತೆಯನ್ನು ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಕನ್ನಡ ಪಾಠಶಾಲೆಯ ತರಗತಿಗಳು ಪ್ರತೀ ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು, ಮಕ್ಕಳ ಕಲಿಕೆಯ ಮಟ್ಟಕ್ಕೆ ಅನುಗುಣವಾಗಿ ಮೂರು ಹಂತಗಳಲ್ಲಿ ತರಗತಿಗಳನ್ನು ಆಯೋಜಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದರು.
ಕತಾರ್‌ನಲ್ಲಿ ನೆಲೆಸಿರುವ ಹೆಚ್ಚಿನ ಸಂಖ್ಯೆಯ ಕನ್ನಡಿಗರು ತಮ್ಮ ಮಕ್ಕಳನ್ನು ಕನ್ನಡ ಪಾಠಶಾಲೆಗೆ ದಾಖಲಿಸಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯೊಂದಿಗೆ ಅವರ ನಂಟನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಕರ್ನಾಟಕ ಸಂಘ ಕತಾರ್ ಮನವಿ ಮಾಡಿದೆ
ಈ ವೇಳೆ ನಿಯಮಿತ ತರಗತಿಗಳಿಗೆ ಅಧಿಕೃತ ಚಾಲನೆ ದೊರೆಯಿತು ಸಂಘದ ಸದಸ್ಯ ಶಶಿಧರ್ ಹೆಚ್. ಬಿ. ,ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು, ಸಲಹಾ ಸಮಿತಿ ಅಧ್ಯಕ್ಷ ಡಾ. ರವಿ ಶೆಟ್ಟಿ, ಮಾಜಿ ಅಧ್ಯಕ್ಷ ಎಚ್. ಕೆ. ಮಧು, ಉಪಾಧ್ಯಕ್ಷ ಅನಿಲ್ ಭಾಸಗಿ, ನಿರ್ವಹಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net