ಖಮೇನಿ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕೇವಲ ಧಾರ್ಮಿಕ ವಿಧಿವಿಧಾನವಾಗಿಯೇ ಉಳಿಯದೆ, ದೇಶದ ರಾಜಕೀಯ ಪರಿಸ್ಥಿತಿ ಮತ್ತು ಇತ್ತೀಚಿನ ಬೆಳವಣಿಗೆಗಳ ನಡುವೆಯೂ ವಿಶೇಷ ಗಮನ ಸೆಳೆದಿದೆ. ದೇಶದ ವಿವಿಧ ಭಾಗಗಳಿಂದ ಬಂದ ಬೆಂಬಲಿಗರು ತಮ್ಮ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದು, ಮುಂದಿನ ಕೆಲವು ದಿನಗಳವರೆಗೆ ನಡೆಯಲಿರುವ ಅಂತಿಮ ದರ್ಶನ ಕಾರ್ಯಕ್ರಮಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, (ಏಜನ್ಸೀಸ್).