ಇರಾನ್ ಸಂವಿಧಾನದ ಪ್ರಕಾರ, ಭಾನುವಾರ ಬೆಳಿಗ್ಗೆ ದೇಶದ ಆಡಳಿತವನ್ನು ನಡೆಸಲು ತಾತ್ಕಾಲಿಕ ನಾಯಕತ್ವ ಮಂಡಳಿಯನ್ನು ರಚಿಸಲಾಗಿದೆ. ಈ ಮಂಡಳಿಯು ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದು, ಇದರಲ್ಲಿ ಇರಾನ್‌ನ ಸುಧಾರಣಾವಾದಿ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ನ್ಯಾಯಾಂಗದ ಮುಖ್ಯಸ್ಥ ಘೋಲಮ್‌ಹೊಸೇನ್ ಮೊಹ್ಸೆನಿ ಎಜೆಇ ಮತ್ತು ಗಾರ್ಡಿಯನ್ ಕೌನ್ಸಿಲ್‌ನ ಸದಸ್ಯರೊಬ್ಬರು ಒಳಗೊಂಡಿರುತ್ತಾರೆ. ಈ ಮೂವರು ಸದಸ್ಯರು ಹೊಸ ಸರ್ವೋಚ್ಚ ನಾಯಕನ ಆಯ್ಕೆಯಾಗುವವರೆಗೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ.