ಸೌದಿಯ ರಿಯಾದ್ ಅಂತಾರಾಷ್ಟ್ರೀಯ ಏರ್ಪೋರ್ಟ್​ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ | Missile attack

ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಮತ್ತು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ(ಅ. 11) ವರದಿಯಾಗಿದೆ.
ಸೌದಿಯ ರಿಯಾದ್ ಅಂತಾರಾಷ್ಟ್ರೀಯ ಏರ್ಪೋರ್ಟ್​ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ | Missile attack
Published on: 

ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಮತ್ತು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ(ಅ. 11) ವರದಿಯಾಗಿದೆ.

ದೇಶೀಯ ವಿಮಾನಗಳಿಗಾಗಿ ಟರ್ಮಿನಲ್ 3 ಮತ್ತು 4 ಅನ್ನು ಹೊಂದಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಂಕೀರ್ಣದ ಮೇಲೆ ಕ್ಷಿಪಣಿ ಅಪ್ಪಳಿಸಿದೆ ಎಂದು ನಾಗರಿಕ ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.

ನೆರೆಯ ಯೆಮನ್‌ನಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಈ ಕೃತ್ಯ ನಡೆಸಿದ್ದಾರೆ ಎಂದು ಸೌದಿ ನೇತೃತ್ವದ ಒಕ್ಕೂಟ ದೂರಿದೆ. ಇರಾನ್ ಯುದ್ಧ ಪ್ರಾರಂಭವಾದ ನಂತರ ಯಾವುದೇ ಗಲ್ಫ್ ಅರಬ್ ದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಹೌತಿಗಳು ಮತ್ತು ಸೌದಿ ಬೆಂಬಲಿತ ಯೆಮೆನ್ ಸರ್ಕಾರಿ ಪಡೆಗಳ ನಡುವಿನ ಹೋರಾಟ ಸಂಘರ್ಷವನ್ನು ಹೆಚ್ಚಿಸಿದೆ.

Also Read
ಬಂಧನಗಳಿಗೆ ಜಗ್ಗುವುದಿಲ್ಲ: ಸಿಇಸಿ ಜ್ಞಾನೇಶ್ ಕುಮಾರ್ ಹುದ್ದೆಯಿಂದ ಇಳಿಯುವವರೆಗೆ ಪ್ರತಿದಿನ ಪ್ರತಿಭಟನೆ ಎಂದ ಸಿಜೆಪಿ! | Jantar Mantar Protest
ಸೌದಿಯ ರಿಯಾದ್ ಅಂತಾರಾಷ್ಟ್ರೀಯ ಏರ್ಪೋರ್ಟ್​ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ | Missile attack

ಮೃತರ ಕುರಿತು ಮಾಹಿತಿ ನೀಡಿರುವ ಸೌದಿ, ಮೃತರಲ್ಲಿ ನಾಲ್ವರು ಸೌದಿ ನಾಗರಿಕರು ಹಾಗೂ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು, ಪ್ಯಾಲೆಸ್ಟೀನಿಯನ್, ಅಮೇರಿಕನ್, ಈಜಿಪ್ಟ್, ಜೋರ್ಡಾನ್, ಸಿರಿಯನ್ ಮತ್ತು ಹಾಗೂ ಸುಡಾನ್ ತಲಾ ಒಬ್ಬರು ಸೇರಿದ್ದಾರೆ. ಮತ್ತು ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

ಇನ್ನೂ ಘಟನೆಯನ್ನು ಖಂಡಿಸಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೂ, ಸೌದಿ ಅರೇಬಿಯಾದ ರಿಯಾದ್‌ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮೇಲೆ ಭಯೋತ್ಪಾದಕ ಹೌತಿಗಳು ನಡೆಸಿದ ಇತ್ತೀಚಿನ ದಾಳಿಗಳನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ. ಘಟನೆಯಲ್ಲಿ ಅಮೆರಿಕದ ಪ್ರಜೆಯೊಬ್ಬರು ಸೇರಿದಂತೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ನಾವು ಸೌದಿ ಅರೇಬಿಯಾ ಮತ್ತು ಅಲ್ಲಿನ ಜನರ ಜೊತೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net