ಇವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್, ಜರ್ಮನಿ ಚಾನ್ಸೆಲರ್ ಫ್ರೀಡ್ರಿಕ್ ಮೆರ್ಜ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ, ಜಪಾನ್ ಪ್ರಧಾನಿ ಸನಾಯ್ ತಕಾಚಿ, ಬ್ರೆಜಿಲ್ ಅಧ್ಯಕ್ಷ ಲುಲಾ ಡಾ ಸಿಲ್ವಾ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಒಂದೇ ಫ್ರೇಮ್ನಲ್ಲಿ ಕಾಣಿಸಿಕೊಂಡರು. ಸಮೂಹ ಚಿತ್ರಕ್ಕೂ ಮುನ್ನ ಫ್ರೆಂಚ್ ಅಧ್ಯಕ್ಷ ಮ್ಯಾಕ್ರಾನ್ ಅವರು ಪ್ರಧಾನಿ ಮೋದಿಯವರನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿದ್ದು ಭಾರತದ ಜಾಗತಿಕ ಗೌರವಕ್ಕೆ ಸಾಕ್ಷಿಯಾಯಿತು,(ಏಜೆನ್ಸೀಸ್).