ಮೋದಿ ಮತ್ತು ಮಿರ್ಜಿಯೋಯೆವ್ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದು, ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಸಹಕಾರ, ಡಿಜಿಟಲ್ ಸಂಪರ್ಕ, ಇಂಧನ, ಶಿಕ್ಷಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಇಬ್ಬರೂ ನಾಯಕರು ಚರ್ಚೆ ನಡೆಸುವ ನಿರೀಕ್ಷೆಯಿದೆ.