2009 ರಿಂದ ನೈಜೀರಿಯಾದಲ್ಲಿ ಬೊಕೊ ಹರಾಮ್, ಅದರ ವಿಭಜಿತ ಗುಂಪಾದ ಇಸ್ಲಾಮಿಕ್ ಸ್ಟೇಟ್ ಪಶ್ಚಿಮ ಆಫ್ರಿಕಾ ಪ್ರಾಂತ್ಯ ಸೇರಿದಂತೆ ಹಲವಾರು ಸಶಸ್ತ್ರ ಗುಂಪುಗಳೊಂದಿಗೆ ಹೋರಾಡುತ್ತಿದೆ. ಈ ಸಂಘರ್ಷದಿಂದಾಗಿ ಸಾವಿರಾರು ಜನರು ಪ್ರಾಣವನ್ನು ಕಳೆದುಕೊಂಡು, ಲಕ್ಷಾಂತರ ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಆತ್ಮಹತ್ಯಾ ಬಾಂಬರ್‌ಗಳ ಬಳಕೆ ಕಡಿಮೆಯಾಗಿದೆ, ಆದರೆ ಬೊಕೊ ಹರಾಮ್ ಇನ್ನೂ ಅಂತಹ ದಾಳಿಗಳನ್ನು ನಡೆಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ವಿಶ್ಲೇಷಕರು ಹೇಳುತ್ತಾರೆ,(ಏಜನ್ಸೀಸ್).