ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾ ಟ್ರೂತ್ನಲ್ಲಿ ಪೋಸ್ಟ್ ಹಾಕಿರುವ ಅವರು, ಯುನೈಟೆಡ್ ಸ್ಟೇಟ್ನಿಂದ ಗ್ರೀನ್‌ಲ್ಯಾಂಡ್ ವಶಕ್ಕೆ ಅಥವಾ ಸಂಪೂರ್ಣ ಖರೀದಿಗೆ ಒಪ್ಪಂದ ಮಾಡಿಕೊಳ್ಳದಿದ್ದರೆ ಜೂನ್ 1 ರಂದು ಸುಂಕವನ್ನು ಶೇಕಡಾ 25 ಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಡೆನ್ಮಾರ್ಕ್, ನಾರ್ವೆ, ಸ್ವೀಡನ್, ಫ್ರಾನ್ಸ್, ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ನೆದರ್‌ಲ್ಯಾಂಡ್ಸ್ ಮತ್ತು ಫಿನ್‌ಲ್ಯಾಂಡ್ ಈ ಸುಂಕವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.