ಪ್ರಾಥಮಿಕ ತನಿಖೆ ಹಾಗೂ ವರದಿಗಳ ಪ್ರಕಾರ, ಈ ಹತ್ಯೆಯ ಹಿಂದೆ ಹಣಕಾಸಿನ ವಿವಾದವಿರುವ ಶಂಕೆ ವ್ಯಕ್ತವಾಗಿದೆ. ಆಯೇಷಾ ಗಿಲಾನಿ ಕೆಲವರಿಗೆ ಹಣ ನೀಡಿದ್ದು, ಅದನ್ನು ಮರಳಿಸುವಂತೆ ಕೇಳಿದ್ದಕ್ಕಾಗಿ ಕೆಲವರು ಈ ಕೃತ್ಯ ಎಸಗಿರಬಹುದು ಎಂದು ಮೃತ ಯುವತಿಯ ತಂದೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಟುಂಬ ಸದಸ್ಯರ ದೂರು ಹಾಗೂ ದೊರೆತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪಾಕಿಸ್ತಾನ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ಚುರುಕುಗೊಳಿಸಿದ್ದಾರೆ, (ಏಜೆನ್ಸೀಸ್).