ಆದಾಗ್ಯೂ, ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ರಹಸ್ಯ ರಾಜತಾಂತ್ರಿಕ ಮಾತುಕತೆಗಳು ಮುಂದುವರಿದಿವೆ. ಇರಾನ್‌ನ ಪರಮಾಣು ಸ್ಥಾವರಗಳ ಮೇಲೆ ನಿಯಂತ್ರಣ ಹೇರಬೇಕು ಮತ್ತು ಯುರೇನಿಯಂ ದಾಸ್ತಾನು ಒಪ್ಪಿಸಬೇಕು ಎಂದು ಅಮೆರಿಕ ಷರತ್ತು ವಿಧಿಸುತ್ತಿದ್ದರೆ, ಇತ್ತ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ದೇಶದ ಕೈಗಾರಿಕೆಗಳಿಗೆ ಆಗಿರುವ ಹಾನಿಯನ್ನು ಉಲ್ಲೇಖಿಸಿ, ಆರ್ಥಿಕ ನಿರ್ಬಂಧಗಳ ಸಡಿಲಿಕೆಗೆ ಪಟ್ಟು ಹಿಡಿದಿದ್ದಾರೆ,(ಏಜೆನ್ಸೀಸ್).