ಈ ಘಟನೆಯು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನಲೆ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧ ಹಾಳಾಯಿತು. ಈ ಕೃತ್ಯವನ್ನು ಜಗತ್ತು ತೀವ್ರವಾಗಿ ಖಂಡಿಸಿತು. ಭಾರತ ಸರ್ಕಾರವು ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ನಿರ್ಧರಿಸಿ, ಕೇವಲ 12 ದಿನಗಳ ನಂತರ ಅಂದರೆ ಫೆಬ್ರವರಿ 26ರಂದು ಮುಂಜಾನೆ ಪಾಕಿಸ್ತಾನದ ಬಾಲಾಕೋಟ್ನಲ್ಲಿದ್ದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಪ್ರಮುಖ ಉಗ್ರಗಾಮಿ ತರಬೇತಿ ಶಿಬಿರಗಳ ಮೇಲೆ ವೈಮಾನಿಕ ದಾಳಿ (Airstrike) ನಡೆಸುವ ಮೂಲಕ ಉಗ್ರರನ್ನು ಸದೆಬಡಿಯಿತು, (ಏಜನ್ಸೀಸ್).