ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಕಪ್ಪು ಸಮುದ್ರವು ಈಗ 'ಸಂಘರ್ಷದ ತಾಣ'ವಾಗಿ ಮಾರ್ಪಟ್ಟಿದೆ. ಕಳೆದ ಡಿಸೆಂಬರ್‌ನಿಂದಲೂ ಇಂತಹ ಸರಣಿ ದಾಳಿಗಳು ನಡೆಯುತ್ತಿದ್ದು, ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್ ಅವರು ಈ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಟರ್ಕಿಯು ರಷ್ಯಾ ಮತ್ತು ಉಕ್ರೇನ್ ಎರಡೂ ರಾಷ್ಟ್ರಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಈ ದಾಳಿಯು ಟರ್ಕಿಯ ರಾಜತಾಂತ್ರಿಕ ಸಮತೋಲನಕ್ಕೆ ಸವಾಲಾಗಿ ಪರಿಣಮಿಸಿದೆ,(ಏಜೆನ್ಸೀಸ್).