ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಉಗ್ರರ ಬಾಂಬ್ ದಾಳಿ; 13 ಸಾವು, 22 ಮಂದಿಗೆ ಗಂಭೀರ ಗಾಯ | bomb attack
ಸಾಂದರ್ಭಿಕ ಚಿತ್ರ
Published on:
Copied
Follow Us
ಪೇಶಾವರ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ(ಆ. 02) ನಡೆದ ಶಾಂತಿ ರ್ಯಾಲಿಯ ಸಂದರ್ಭದಲ್ಲಿ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು(bomb attack), ಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ವಾತ್ ಜಿಲ್ಲೆಯ ಕಬಲ್ ಪಟ್ಟಣದಲ್ಲಿ ಸ್ವಾತ್ ಶಾಂತಿ ರ್ಯಾಲಿ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಕನಿಷ್ಠ 13 ಜನ ಮೃತಪಟ್ಟಿದ್ದಾರೆ. 22 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಪೋಟವನ್ನು ಆತ್ಮಾಹುತಿ ದಾಳಿ ಎಂದು ಶಂಕಿಸಿದ್ದರು, ಆದರೆ ಈ ಬಗ್ಗೆ ತಕ್ಷಣದ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಸ್ವಾತ್ ಶಾಂತಿ ರ್ಯಾಲಿಯನ್ನು ಸ್ವಾತ್ ಅಮನ್ ಜಿರ್ಗಾ(ಸ್ಥಳೀಯ ಬುಡಕಟ್ಟು ಮಂಡಳಿ) ಆಯೋಜಿಸಿತ್ತು.
ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಈ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಒತ್ತಾಯಿಸಿ ಭಾಗವಹಿಸುವವರು ಘೋಷಣೆಗಳನ್ನು ಕೂಗುತ್ತಾ ಮತ್ತು ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನಾ ಜಾಥಾ ನಡೆಸಿದ್ದರು ಎನ್ನಲಾಗಿದೆ (ಏಜೆನ್ಸೀಸ್).