ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ಭೀಕರ ಹಾಗೂ ಅತ್ಯಂತ ಆಘಾತಕಾರಿ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕೇವಲ 11 ವರ್ಷದ ಬಾಲಕನೊಬ್ಬ ಚಲಾಯಿಸುತ್ತಿದ್ದ ಪಿಕ್‌ಅಪ್ ಟ್ರಕ್ ಹರಿದು ಒಂಬತ್ತು ಮಂದಿ ಬೌದ್ಧ ಸನ್ಯಾಸಿಗಳು ( Buddhist monks ) ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತದಲ್ಲಿ 20ಕ್ಕೂ ಹೆಚ್ಚು ಭಕ್ತರು ಹಾಗೂ ಸಾರ್ವಜನಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಅಲ್ಲಿನ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ಕರಳು ಹಿಂಡುವಂತಿರುವ ಈ ದುರ್ಘಟನೆ ಇಡೀ ಥಾಯ್ಲೆಂಡ್ ದೇಶವನ್ನೇ ಬೆಚ್ಚಿಬೀಳಿಸಿದೆ.