ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಯುದ್ಧ ಘೋಷಿಸಿ ಇಂದಿಗೆ 11 ದಿನಗಳು ಸಂದಿವೆ. ಪರಿಸ್ಥಿತಿ ತಿಳಿಯಾಗುವ ಬದಲು ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಅವರು ಸೋಮವಾರ ರಾತ್ರಿ (ಮಾ. 9) ಇರಾನ್‌ಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ನಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ, ಇರಾನ್‌ನ ಸರ್ವಾಧಿಕಾರಿ ಆಡಳಿತದ ಬೆನ್ನುಮೂಳೆ ಮುರಿಯುವವರೆಗೆ ನಾವು ವಿಶ್ರಮಿಸುವುದಿಲ್ಲ ಎಂದು ಗುಡುಗಿದ್ದಾರೆ.