ಸ್ಥಳಕ್ಕೆ ದೌಡಾಯಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು (NDRF) ಮತ್ತು ತುರ್ತು ಸೇವಾ ಸಿಬ್ಬಂದಿ ಕಳೆದ 12 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಗಣಿಯ ಆಳ ಮತ್ತು ಮಣ್ಣಿನ ಅಸ್ಥಿರತೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಭಾರಿ ಅಡಚಣೆಯಾಗಿದೆ. ಅವಶೇಷಗಳ ಅಡಿಯಿಂದ ಹೊರತೆಗೆಯಲಾದ ದೇಹಗಳು ಗುರುತು ಹಿಡಿಯಲಾಗದಷ್ಟು ಛಿದ್ರಗೊಂಡಿದ್ದು, ಘಟನಾ ಸ್ಥಳದಲ್ಲಿ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ ಎಂದು ವರದಿ ಮಾಡಿದೆ.