ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತಾರಕಕ್ಕೇರಿರುವಾಗಲೇ, ಇರಾನ್(Iran) ತನ್ನ ಅತ್ಯಾಧುನಿಕ ದೀರ್ಘ ವ್ಯಾಪ್ತಿಯ ವಾಯು ರಕ್ಷಣಾ ಕ್ಷಿಪಣಿ ಸೈಯದ್-3G ಅನ್ನು ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಿದೆ. ಅಮೆರಿಕವು ಇರಾನ್ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಸಾಹಸಕ್ಕೆ ಕೈಹಾಕಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಮೂಡಿಸಿದೆ.