

ಫೆಬ್ರವರಿ 28ರಂದು ಆರಂಭವಾದ ಇರಾನ್ ಜೊತೆಗಿನ ಸಂಘರ್ಷವು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ಇರಾನ್ ಹೆಚ್ಚು ದಿನ ಹೋರಾಡಲು ಸಾಧ್ಯವಿಲ್ಲ ಎಂದಿರುವ ಟ್ರಂಪ್, ಅದು ಅಣ್ವಸ್ತ್ರವನ್ನು ಪಡೆದುಕೊಳ್ಳಲು ಯಾವುದೇ ಕಾರಣಕ್ಕೂ ಅನುಮತಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.