ಶನಿವಾರ ಬೆಳಿಗ್ಗೆ ವೈಟ್ ಹೌಸ್ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಲ್ಲ ಎಂದು ಘೋಷಿಸಿದ ಬೆನ್ನಲ್ಲೇ, ಟ್ರಂಪ್ ಅವರನ್ನು ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂಬ ವದಂತಿಗಳು ಎಕ್ಸ್ ಸೇರಿದಂತೆ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಹರಡಿದ್ದವು. ಅಧ್ಯಕ್ಷ ಟ್ರಂಪ್ ಅವರು ಆರೋಗ್ಯವಾಗಿದ್ದಾರೆ ಮತ್ತು ಓವಲ್ ಕಚೇರಿಯಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವೈಟ್ ಹೌಸ್ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ಸ್ಪಷ್ಟನೆ ಕೊಟ್ಟಿದ್ದಾರೆ, (ಏಜೆನ್ಸೀಸ್).