ಅಮೆರಿಕದ ಅಧಿಕಾರಿಗಳ ಪ್ರಕಾರ, ವೀಸಾ ಅರ್ಜಿದಾರರನ್ನು ಇನ್ನಷ್ಟು ಸಮಗ್ರವಾಗಿ ಪರಿಶೀಲಿಸುವುದು ತರಬೇತಿಯ ಪ್ರಮುಖ ಉದ್ದೇಶ. ಅದರಲ್ಲೂ ಅಮೆರಿಕದ ಸಾರ್ವಜನಿಕ ಸೌಲಭ್ಯಗಳ ಮೇಲೆ ಅವಲಂಬಿತರಾಗುವ ಸಾಧ್ಯತೆ ಇರುವ ಅರ್ಜಿದಾರರನ್ನು ಗುರುತಿಸುವ ಬಗ್ಗೆ ಕಾನ್ಸುಲರ್ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತೆ. ಟ್ರಂಪ್ ಅಧಿಕಾರಕ್ಕೆ ಬಂದ ಬಳಿಕ ಅಮೆರಿಕದಲ್ಲಿ ವಲಸೆ ನಿಯಮಗಳು ಮತ್ತಷ್ಟು ಕಠಿಣವಾಗಿವೆ. ವೀಸಾ ಹಾಗೂ ಗ್ರೀನ್ ಕಾರ್ಡ್‌ಗಳನ್ನು ರದ್ದುಪಡಿಸುವುದು, ಕೆಲವು ಅರ್ಜಿಗಳನ್ನು ತಿರಸ್ಕರಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಆಡಳಿತ ಕೈಗೊಂಡಿದೆ.