ಜೆರುಸಲೇಂ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗಿದ್ದು, ಶನಿವಾರ ಮುಂಜಾನೆ ಇಸ್ರೇಲ್ ರಕ್ಷಣಾ ಪಡೆಗಳು(Israel Preventive Strike) ಇರಾನ್ ವಿರುದ್ಧ ವ್ಯವಸ್ಥಿತ ತಡೆಗಟ್ಟುವ ದಾಳಿಯನ್ನು ಪ್ರಾರಂಭಿಸಿವೆ. ಇಸ್ರೇಲ್‌ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಈ ಕಾರ್ಯಾಚರಣೆಯನ್ನು ಖಚಿತಪಡಿಸಿದ್ದು, ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.