ಇರಾನ್‌ನಲ್ಲಿ ಸಿಲುಕಿದ್ದ ಭಾರತೀಯರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಸರ್ಕಾರ, ಇದುವರೆಗೆ 4,25,000 ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ತಿಳಿಸಿದೆ. ಉಳಿದಿರುವ ಭಾರತೀಯರ ಹಿತಾಸಕ್ತಿಯನ್ನು ರಕ್ಷಿಸಲು ರಾಯಭಾರ ಕಚೇರಿಗಳು ಹಗಲಿರುಳು ಶ್ರಮಿಸುತ್ತಿವೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕಾ ನಿರ್ಬಂಧ ಹೇರಿದ್ದರೂ ಭಾರತವು ತನ್ನ ಇಂಧನ ಭದ್ರತೆಗಾಗಿ ಇರಾನ್‌ನಿಂದ ತೈಲ ಖರೀದಿ ಮುಂದುವರಿಸಿದ್ದನ್ನು ಸಚಿವರು ನೆನಪಿಸಿದರು.