ಭ್ರಷ್ಟಾಚಾರದ ಆರೋಪದ ಮೇಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ 2023 ರಿಂದ ಅಡಿಯಾಲ ಜೈಲಿನಲ್ಲಿದ್ದಾರೆ. ಆದರೆ ನಿನ್ನೆ ಇಮ್ರಾನ್ ಖಾನ್ ಜೈಲಿನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿತ್ತು. ಜೈಲಿನಲ್ಲಿ ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡುತ್ತಿಲ್ಲ, ಹೀಗಾಗಿ ಅವರು ಸತ್ತಿರಬಹುದೆಂಬ ಅನುಮಾನಗಳನ್ನು ಹುಟ್ಟುಹಾಕಿತ್ತು. ಈ ವದಂತಿಗಳ ಹಿನ್ನೆಲೆಯಲ್ಲಿ ಅವರ ಸಹೋದರಿಯರು ಇಮ್ರಾನ್ ಖಾನ್ ಅವರನ್ನು ಭೇಟಿಯಾಗಲು ಅವಕಾಶ ಕೇಳಿದ್ದರು. ಮೂರು ವಾರಗಳಿಂದ ತಮ್ಮ ಸಹೋದರನನ್ನು ನೋಡಲು ಅವಕಾಶ ನೀಡಿಲ್ಲ ಎಂದು ಅವರ ಸಹೋದರಿಯರು ಆರೋಪಿಸಿದ್ದಾರೆ.