ಟೆಹ್ರಾನ್: ಪ್ರಸಕ್ತ, ಇರಾನ್ನಲ್ಲಿ ದೊಡ್ಡ ಪ್ರತಿಭಟನೆಗಳು ನಡೆಯುತ್ತಿದ್ದು, ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧದ ಆಕ್ರೋಶಗಳು ತೀವ್ರಗೊಂಡಿವೆ. ಇಲ್ಲಿಯವರೆಗೆ 3,400ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 18,400ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಇದೆಲ್ಲದರ ಮಧ್ಯೆ, ಇರಾನ್ ರಾಜಕುಮಾರಿಯ ದುರಂತ ಕಥೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.