ನಕಲಿ ಹಕ್ಕುಪತ್ರ ಪ್ರಕರಣ ಶೀಘ್ರ ತನಿಖೆ ನಡೆಸಿ

hos kdp (1)
ಹೊಸನಗರ ತಾಪಂ ಕೆಡಿಪಿ ಸಭೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಗೋಪಾಲಕೃಷ್ಣ ಬೇಳೂರು, ತಾಪಂ ಇಒ ನರೇಂದ್ರಕುಮಾರ್ ಇತರರಿದ್ದರು.
Published on

ಹೊಸನಗರ: ಈ ಹಿಂದೆ ಎಲ್.ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ದಾಖಲಾದಂತಹ ನಕಲಿ ಹಕ್ಕುಪತ್ರ ಜಾಲ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ, ತಪ್ಪಿತಸ್ಥರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ, ಪ್ರಕರಣದಲ್ಲಿ ಇನ್ಯಾರು ಭಾಗಿಯಾಗಿದ್ದಾರೆ ಎಂಬುದನ್ನ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಗೋಪಾಲಕೃಷ್ಣ ಬೇಳೂರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಹೊಸನಗರ ತಾಪಂ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕರೊನಾ ನಿಯಂತ್ರಣಕ್ಕೆ ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಉಪಕರಣಗಳು, ಹೆಚ್ಚುವರಿ ಬೆಡ್ ವ್ಯವಸ್ಥೆ, ಆಕ್ಸಿಜನ್, ಔಷಧ ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನ ವಿವಿಧ ಅಭಿವೃದ್ಧಿ ಹಂತದ ಕಾಮಗಾರಿಗಳಾದ ಜೆಜೆಎಂ, ವಿದ್ಯುತ್ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆದರು.

ಕೃಷಿ ಪ್ರಧಾನ ತಾಲೂಕಿನಲ್ಲಿ ರೈತರಿಗೆ ಸಮಸ್ಯೆ ಆಗದಂತೆ ಅಧಿಕಾರಿಗಳ ಎಚ್ಚರವಹಿಸಬೇಕು. ನಿಯಮಿತವಾಗಿ ರೈತರ ಸಭೆ ನಡೆಸಬೇಕು. ಕಚೇರಿ ಬಿಟ್ಟು ರೈತರ ಹೊಲಗಳಿಗೆ ಭೇಟಿ ನೀಡಿ ಸಲಹೆ ನೀಡಬೇಕು. ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ನಗರ, ನಿಟ್ಟೂರು ಸಂಪೇಕಟ್ಟೆ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇದ್ದು, ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಪಾಯ ಹಂತದಲ್ಲಿರುವ ಶಾಲಾ ಕಟ್ಟಡಗಳು ಹಾಗೂ ಶಾಲಾ ಕಟ್ಟಡದ ಮೇಲೆ ವಾಲಿರುವಂತಹ ಮರಗಳ ಕುರಿತು ಮಾಹಿತಿ ಸಂಗ್ರಹಿಸಿ ಅದನ್ನು ನಮ್ಮ ಗಮನಕ್ಕೆ ತನ್ನಿ. ಲಿತಾಂಶ ಸುಧಾರಣೆಯತ್ತ ಹೆಚ್ಚು ಗಮನ ಕೊಡಿ ಎಂದು ಶಿಕ್ಷಣಾಧಿಕಾರಿಗಳಿಗೆ ಆರಗ ಜ್ಞಾನೇಂದ್ರ ಸೂಚಿಸಿದರು.

ಹೊಸನಗರದಲ್ಲಿ ವಿದ್ಯುತ್ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮೆಸ್ಕಾಂ ಅಧಿಕಾರಿಗಳಿಗೆ ಇದನ್ನು ಶೀಘ್ರ ಸರಿಪಡಿಸುವಂತೆ ಹಾಗೂ ವಿದ್ಯುತ್ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಮಳೆಗಾಲ ಸಮಯದಲ್ಲಿ ಅಕೇಶಿಯಾ ಮರಗಳ ಕಟಾವಿಗೆ ಅವಕಾಶ ನೀಡಬಾರದು. ಇದರಿಂದ ರಸ್ತೆಗಳು ಹಾಳಾಗುತ್ತಿವೆ. ಅವಕಾಶ ನೀಡಿದ್ದು ನಮ್ಮ ಗಮನಕ್ಕೆ ಬಂದರೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಎಚ್ಚರಿಸಿದರು.

ತಹಸೀಲ್ದಾರ್ ರಶ್ಮಿ ಹಾಲೇಶ್, ತಾಪಂ ಇಒ ನರೇಂದ್ರಕುಮಾರ್, ಜಿಪಂ ಅಧಿಕಾರಿ ಜಯಲಕ್ಷ್ಮೀ, ಆರ್‌ಎ್ಒ ಮೋಹನ್‌ಕುಮಾರ್, ಕೆಡಿಪಿ ಸಮಿತಿ ಸದಸ್ಯರಾದ ವಾಟಗೋಡು ಸುರೇಶ್, ಸುಮಾ ಸುಬ್ರಹ್ಮಣ್ಯ, ಎಂ.ಎಂ.ಪರಮೇಶ್ವರ್, ಆಸ್ಿ, ಚಂದ್ರೇಶ್, ಚಿದಂಬರ್, ನಾಗೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net