ಸಹಾಯಧನಕ್ಕೆ ಅರ್ಜಿ ಆಹ್ವಾನ

application
Published on

ಮೈಸೂರು:2024/25ನೇ ಸಾಲಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು ಅಥವಾ ಎಮ್ಮೆ ಖರೀದಿ ಉದ್ದೇಶಕ್ಕಾಗಿ ಬ್ಯಾಂಕ್‌ಗಳಿoದ ಪಡೆದಿರುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿರುವ ಮಹಿಳೆಯರಿಗೆ ಶೇ.6% ರ ಬಡ್ಡಿ ಸಹಾಯಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಆಸಕ್ತ ರೈತ ಮಹಿಳೆಯರು ಸ್ಥಳೀಯ ಪಶುಪಾಲನಾ ಇಲಾಖೆಯ ಪಶುವೈದ್ಯ ಸಂಸ್ಥೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲಾದ ಫಲಾಪೇಕ್ಷಿಗಳನ್ನು ಆಯಾ ತಾಲ್ಲೂಕು ಆಯ್ಕೆ ಸಮಿತಿ ಮೂಲಕ ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಬಿ.ಪಿ.ಎಲ್ ಹೊಂದಿರುವ ಮಹಿಳೆಯರನ್ನು ಆದ್ಯತೆ ಮೇರೆಗೆ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಅಥವಾ ಸ್ಥಳೀಯ ಪಶುವೈದ್ಯರನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net