

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ (ರಾಜ್ಯ ಪಠ್ಯಕ್ರಮ./ಸಿ.ಬಿ.ಎಸ್.ಇ/ಐ.ಸಿ.ಎಸ್.ಇ) ಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶೇ.60 ರಿಂದ ಶೇ.74.99 ಅಂಕ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರೂ.7000 ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ರೂ.15,000 ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಅರ್ಹ ವಿದ್ಯಾರ್ಥಿಗಳು www.swdservices.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳತಕ್ಕದ್ದು. ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಸ್ವೀಕೃತಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಪಾಸ್‌ಬುಕ್ ನಕಲು ಪ್ರತಿಗಳನ್ನು ಸಂಬoಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ ಧೃಢೀಕರಿಸಿ ಪಡುವಾರಹಳ್ಳಿಯಲ್ಲಿರುವ ಆದಿ ಪಂಪ ರಸ್ತೆಯ ಬಾಬು ಜಗಜೀವನ್ ರಾಂ ಕಟ್ಟಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2520910 ಹಾಗೂ ಇಮೇಲ್ tswomys@gmail.com ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.