ಆಕ್ಷೇಪಣೆಗೆ ಅರ್ಜಿ ಆಹ್ವಾನ

application
Published on

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ 2021-22ನೇ ಸಾಲಿನ ಶೇ.5ರ ಅನುದಾನದಡಿಯಲ್ಲಿ ವಿಶೇಷ ಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗಲು ರೆಟ್ರೋಫೀಟ್‌ಮೆಂಟ್ ಜೊಡಣೆಯುಳ್ಳ ಸ್ಕೂಟರ್‌ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.

ವಿಶೇಷ ಚೇತನರಿಂದ ಮಹಾನಗರ ಪಾಲಿಕೆಗೆ ಒಟ್ಟು 115 ಅರ್ಜಿಗಳು ಸ್ವೀಕೃತಗೊಂಡಿದ್ದು, 52 ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಆಯ್ಕೆ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಮುಂದಿನ ಹಂತದಲ್ಲಿ ಪರಿಶೀಲಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಮವಹಿಸಲಾಗುವುದು.

ಆಯ್ಕೆಯಾಗಿರುವ 52 ಫಲಾನುಭವಿಗಳ ಪಟ್ಟಿಯನ್ನು ನಗರ ಪಾಲಿಕೆ ಕಛೇರಿಯ ಸೂಚನಾ ಫಲಕದಲ್ಲಿ ಪ್ರಚೂರಪಡಿಸಲಾಗಿದ್ದು, ಸಾರ್ವಜನಿಕರು ಹಾಗೂ ವಿಶೇಷ ಚೇತನರು ಈ ಸಂಬoಧ ಯಾವುದಾದರೂ ತಂಟೆ ತಕರಾರು ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಜಲೈ 30 ರೊಳಗಾಗಿ ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರವರಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ಮೈಸೂರು ಮಹಾನಗರಪಾಲಿಕೆಯ ಹೆಚ್ಚುವರಿ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net