ಗೃಹಲಕ್ಷ್ಮಿಗೆ ಚಾಲನೆ ಕೊಡಲು ಇಬ್ಬರು ನಾಯಕಿಯರಿಗೆ ಆಹ್ವಾನ? ಅವರ್ಯಾರು ಗೊತ್ತಾ?

Congress (4)
Published on

ಬೆಂಗಳೂರು: ರಾಜೀವ್ ಗಾಂಧಿ ಅವರ ಜನ್ಮ ದಿನದಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕೊಡಲಾಗುತ್ತಿದೆ.

ಇದೇ ವೇಳೆ ಯೋಜನೆಗೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರ ಪುತ್ರಿ ಪ್ರಿಯಾಂಕ ವಾಡ್ರಾ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆಗಸ್ಟ್ 20ರಂದು ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಸಿ, ಇಡೀ ದೇಶಕ್ಕೊಂದು ಸಂದೇಶ ಕಳಿಸಬೇಕೆಂಬುದು ಸರ್ಕಾರದ ಬಯಕೆ. ಹೀಗಾಗಿಯೇ ಆಹ್ವಾನ ನೀಡಲಾಗಿದೆ. ಬಹುತೇಕ ಪಾಲ್ಗೊಳ್ಳುವುದಾಗಿ ಒಪ್ಪಿಗೆಯೂ ಸಿಕ್ಕಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನು ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿ ಹಳ್ಳಿಗೆ ಮುಟ್ಟಿಸುವ ಉದ್ದೇಶದಿಂದ, ಆಗಸ್ಟ್ 20ರಂದು ಪ್ರತಿಯೊಂದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ, ಮಟ್ಟದಲ್ಲಿ, ಮಹಾನಗರ ಪಾಲಿಕೆಯ ವಾರ್ಡ್ ಮಟ್ಟದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳನ್ನು ಸೇರಿಸಿ ಪಕ್ಷಾತೀತವಾಗಿ ಸಂಭ್ರಮಾಚರಣೆ ಮಾಡುವಂತೆ ಸೂಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ವರೆಗೆ ಈ ಯೋಜನೆಗೆ 1 ಕೋಟಿ 28 ಲಕ್ಷ ಮಹಿಳೆಯರ ಅರ್ಜಿಯನ್ನು ಪರಿಗಣಿಸಿದ್ದೇವೆ ಎಂದು ಇದೇ ವೇಳೆ ಮಾಹಿತಿ ಹಂಚಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಸಿಕ 2000 ರೂ. ನೀಡಲಾಗುತ್ತದೆ. ರಾಜ್ಯ ಸರ್ಕಾರ ಯೋಜನೆಯ ನೋಂದಣಿಯನ್ನು 16 ಜೂನ್ 2023 ರಿಂದ ಪ್ರಾರಂಭಿಸಿದೆ. ಮನೆಯ ಮುಖ್ಯಸ್ಥ ಮಹಿಳೆ ಅಥವಾ ಯಜಮಾನಿಗೆ ಮಾಸಿಕ ಎರಡು ಸಾವಿರ ರೂ. ನೀಡುವ ಯೋಜನೆ ಇದಾಗಿದೆ. ಯೋಜನೆಯ ಪ್ರಯೋಜನ ಪಡೆಯಲು ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್ sevasindhuservices.karnataka.gov.in ನಲ್ಲೂ ನೋಂದಾಯಿಸಿಕೊಳ್ಳಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net