

ಅರಕಲಗೂಡು: ವಿದ್ಯಾರ್ಥಿಗಳು ವ್ಯಾಸಂಗದೊಂದಿಗೆ ಕ್ರೀಡೆಗಳಲ್ಲೂ ತೊಡಗಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಹೇಳಿದರು.
ಪಟ್ಟಣದ ಕ್ರಿಸ್ತಜ್ಯೋತಿ ಶಾಲಾ ಮೈದಾನದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಕಾರಿ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಆಟವಾಡಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ, ದೈಹಿಕ ಶಿಕ್ಷಣಶಿಕ್ಷಕ ಸಂಜೀವ್‌ಕುಮಾರ್ ಇತರರಿದ್ದರು.