ಸ್ಥಳ ನಿಯೋಜನೆ ಮಾಡದೆ ಡಿ.ರೂಪ, ರೋಹಿಣಿ ಸಿಂಧೂರಿಗೆ ಸರ್ಕಾರದಿಂದ ವರ್ಗಾವಣೆ ಆದೇಶ

IPS-Roopa
Published on

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಗಳ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದು ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಇದೀಗ ಈ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರೊಂದಿಗೆ ರೂಪಾ ಮೌದ್ಗಿಲ್ ಪತಿ ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿದೆ.

ಸ್ಥಳ ನಿಯೋಜನೆ ಮಾಡದೆ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಮುನೇಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.

ರೋಹಿಣಿ ಸಿಂಧೂರಿ ಅವರು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಹಾಗೂ ರೂಪಾ ಮೌದ್ಗಿಲ್ ಕರಕುಶಲ ಅಭಿವೃದ್ಧಿ ನಿಗಮ ಎಂಡಿ ಆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net