ಐಪಿಎಸ್ ಅಧಿಕಾರಿ ಮಕ್ಕಳ ಜತೆ ದುರ್ವತನೆ

IPS
Published on

ಬೆಂಗಳೂರು: ಇತ್ತೀಚೆಗೆ ನಡೆದ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ಐಪಿಎಲ್ ಪಂದ್ಯಾವಳಿ ವೇಳೆ ಹಿರಿಯ ಐಪಿಎಸ್ ಅಧಿಕಾರಿ ಮಕ್ಕಳ ಜತೆ ದುರ್ವತನೆ ತೋರಿದ ಅಪರಿಚಿತರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಪಿಎಲ್ ಪಂದ್ಯದ ವೀಕ್ಷಣೆಗೆ ಅಧಿಕಾರಿ ಮಕ್ಕಳು ಡೈಮಂಡ್ ಬಾಕ್ಸ್‌ನಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಪತ್ನಿ ದೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ ತಂಡಗಳ ಮಧ್ಯೆ ಶನಿವಾರ ಪಂದ್ಯ ನಡೆದಿತ್ತು.

ಕ್ರಿಕೆಟ್ ವೀಕ್ಷಣೆ ವೇಳೆ ನನ್ನ ಮಕ್ಕಳಿಗೆ ವಿನಾಕಾರಣ ಅಪರಿಚಿತ ವ್ಯಕ್ತಿ, ಜೋರಾಗಿ ಕಿರುಚಾಡಿ ಬೆದರಿಕೆ ಹಾಕಿದ್ದಾರೆ. ನನ್ನ ಮಗಳ ಜತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಆಕ್ಷೇಪಿಸಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ಸಹ ಆರೋಪಿತರು ನಿಂದಿಸಿದರು. ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ನನ್ನ ಮಕ್ಕಳಿಗೆ ತೊಂದರೆ ಕೊಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net