

ತೆಹ್ರಾನ್: ನಿನ್ನೆ (ಮೇ.18) ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಇರಾನ್ ಅಧ್ಯಕ್ಷರಿಗೆ ಏನಾಯಿತು? ಎಂಬುದು ನಿಖರವಾಗಿ ತಿಳಿದುಬಂದಿರಲಿಲ್ಲ. ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ರಕ್ಷಣಾ ತಂಡಗಳು ತೆರಳಿ, ಹೆಲಿಕಾಪ್ಟರ್ ಬಿದ್ದ ಜಾಗವನ್ನು ಪರಿಶೀಲನೆ ನಡೆಸಿ, ಇದೀಗ ಮಾಹಿತಿ ಹಂಚಿಕೊಂಡಿದ್ದು, ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪತನದ ಬೆನ್ನಲ್ಲೇ ಇರಾನ್ ಅಧ್ಯಕ್ಷರ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದ ರಕ್ಷಣಾ ತಂಡಕ್ಕೆ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಏನಾಗಿದೆ ಎಂಬುದನ್ನು ಆರಂಭಿಕ ಹಂತದಲ್ಲಿ ತಿಳಿಯಲು ಕಷ್ಟಸಾಧ್ಯ ಎಂದು ನಿನ್ನೆ ಇರಾನ್‌ನ ಆಂತರಿಕ ಸಚಿವರು ಮಾಹಿತಿ ಹಂಚಿಕೊಂಡಿದ್ದರು.
"ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ರೈಸಿ ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ಭಾರತ ಇರಾನ್ ಜತೆಗಿದೆ" ಎಂದು ಎಕ್ಸ್ನಲ್ಲಿ ತಿಳಿಸಿದ್ದಾರೆ.