Iran–Israel War: ಇಸ್ರೇಲ್​ ಮೇಲೆ 100 ಕ್ಷಿಪಣಿಗಳಿಂದ ಇರಾನ್ ಭಯಾನಕ​ ದಾಳಿ

isrel
Published on

ಬೈರೂತ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ ಎಂದು ಇಸ್ರೇಲ್​ ಮಿಲಿಟರಿ ಮಂಗಳವಾರ ದೃಢಪಡಿಸಿದೆ.

ಇಸ್ರೇಲ್​ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್​​ನಿಂದ ಇಸ್ರೇಲ್‌ ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ. ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಇಸ್ರೇಲ್‌ ತನ್ನ ದೇಶದ ನಾಗರಿಕರಿಗೆ ತಿಳಿಸಿದೆ.

ಭಾರತೀಯ ಕಾಲಮಾನ ರಾತ್ರಿ 10:08ರ ಸುಮಾರಿಗೆ ಇಸ್ರೇಲ್‌ ರಕ್ಷಣಾಪಡೆಗನ್ನು ಗುರಿಯಾಗಿಸಿ ಇರಾನ್‌ ರಾಕೆಟ್‌ ದಾಳಿ ನಡೆಸಿದೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಇಸ್ರೇಲ್ ವಾಯುಪಡೆ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸೇರಿದಂತೆ ಪ್ರಮುಖ ನಾಯಕರನ್ನು ಹತ್ಯೆಗೈದ ಬಳಿಕ ಇಸ್ರೇಲ್-ಇರಾನ್ ನಡುವಿನ ಯುದ್ಧ ಸ್ವರೂಪವು ಮತ್ತಷ್ಟು ತೀವ್ರಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net