

ಹಾವೇರಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸೆ. 4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9&19ಕ್ಕೆ ಹಾವೇರಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವರು. 10&30ಕ್ಕೆ ಪದ ಕಚೇರಿಗೆ ಭೇಟಿ ನೀಡುವರು. 11&30ಕ್ಕೆ ಹಾವೇರಿಯಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಚಿಕ್ಕಹುಲ್ಯಾಳ ಗ್ರಾಮದ ಹತ್ತಿರ ವರದಾ ನದಿಯಿಂದ ಏತ ನೀರಾವರಿ ಕಾಮಗಾರಿ ವೀಣೆ, 1 ಗಂಟೆಗೆ ಮಕರವಳ್ಳಿ ಏತ ನೀರಾವರಿ ಯೋಜನೆ ಪುನಶ್ಚೇತನ ಕಾಮಗಾರಿ ವೀಣೆ, ಮಧ್ಯಾಹ್ನ 2 ಗಂಟೆಗೆ ಸಮ್ಮಸಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಣ್ಣ ನೀರಾವರಿ ಕೆರೆಗಳಿಗೆ ವರದಾ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಕಾಮಗಾರಿಗಳ ವೀಣೆ, 3&30ಕ್ಕೆ ಹಿರೇಕೆರೂರು ತಾಲೂಕಿನ ಕಚವಿ ಕೆರೆ ವೀಣೆ, ಸಂಜೆ 4&30ಕ್ಕೆ ರಾಣೆಬೆನ್ನೂರ ತಾಲೂಕಿನ ಕರೂರು ಕೆರೆ ಅಭಿವೃದ್ಧಿ ಕಾಮಗಾರಿ ವೀಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.