

ಬಾಲಿವುಡ್ ನಟ ಸಲ್ಮಾನ್ ಖಾನ್ ಸದ್ಯ ಯಶ್ ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಆದಿತ್ಯ ಚೋಪ್ರಾ ನಿರ್ದೇಶನ ಮಾಡಿರುವ 'ಟೈಗರ್ 3' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಕಿಂಗ್ ಖಾನ್ ಅಲಿಯಾಸ್ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
ಅಭಿಮಾನಿಗಳು 'ಟೈಗರ್ 3' ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ. ಸಲ್ಮಾನ್ ಖಾನ್ ಚಿತ್ರದ ಮೇಲೆ ಸದ್ಯ ಭಾರೂಈ ನಿರೀಕ್ಷೆಯೂ ಇದೆ.
ಈ ನಡುವೆ ಸಲ್ಲು ಆರೋಗ್ಯ ಹದಗೆಟ್ಟಿದೆಯಾ ಎಂಬ ಪ್ರಶ್ನೆ ಎದ್ದಿದೆ. ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಅವರ ಆರೋಗ್ಯದ ಬಗ್ಗೆ ಅನುಮಾನ ಮೂಡಿಸುತ್ತಿದೆ. ಡ್ಯಾನ್ಸ್ ವಿಡಿಯೋ ನೋಡಿದ ಅಭಿಮಾನಿಗಳು ಬ್ಯಾಡ್ ಬಾಯ್ ಆರೋಗ್ಯ ಹದಗೆಡುತ್ತಿದೆ ಎಂದಿದ್ದಾರೆ.
ವಿಡಿಯೋದಲ್ಲಿ ನಟ ಸಲ್ಮಾನ್ ಖಾನ್ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಡಾನ್ಸ್ ಮಾಡಲು ಸಲ್ಲು ಬಾಯ್‌ಗೆ ಆಗುತ್ತಿಲ್ಲ ಮತ್ತು ಡ್ಯಾನ್ಸ್ ಮಾಡುವಾಗ ಸ್ವಲ್ಪ ದಣಿದಂತಿದ್ದಾರೆ.
ಸಲ್ಲು ಈ ಬಾರಿ ಸಂಪೂರ್ಣ ಡಲ್ ಆಗಿ ಕಾಣಿಸಿಕೊಂಡಿದ್ದಾರೆ. ಹಮ್ಕಾ ಪೀನಿ ಹೈ ಹಾಡಿಗೆ ಸಲ್ಮಾನ್ ಖಾನ್ ಹೆಜ್ಜೆ ಹಾಕಿದ್ದಾರೆ. ಒಂದು ಹೆಜ್ಜೆ ಕೂಡ ಅವರಿಗೆ ಕಷ್ಟವೆನಿಸುತ್ತಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡಲು ಪ್ರಾರಂಭಿಸಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಆ ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ.