

ಶಿವಮೊಗ್ಗ: ಕೇದಾರ ಪೀಠದ ಶ್ರೀ ಭೀಮಾಶಂಕರಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಂಗೀತಯುಕ್ತ ಇಷ್ಟಲಿಂಗ ಪೂಜೆಯು ಚೌಕಿಮಠದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.
ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಳಲಿ ಮಠ, ಜಗಳೂರು ಕಣ್ವಕುಪ್ಪೆ, ಚನ್ನಗಿರಿ ಹಿರೇಮಠ, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀಗಳ ಸಮ್ಮುಖದಲ್ಲಿ ಕೇದಾರ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬೆಳಗ್ಗೆ ಚೌಕಿಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು.