ಶೇ.90ಕ್ಕೂ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ; ಕರಾವಳಿ ಜನತೆಗೆ ಸಚಿವ ಅಭಿನಂದನೆ

Ishwar Khandre
Published on

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಜನರು ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ, ಪೂಜಿಸುತ್ತಿದ್ದು, ಆ ಜಿಲ್ಲೆಗಳ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಇತರ ಜಿಲ್ಲೆಗಳ ಜನರೂ ಇದೇ ಪದ್ಧತಿ ಅನುಸರಿಸುವಂತೆ ಮನವಿ ಮಾಡುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರ ಜೊತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತನಾಡಿದರು.

ಪಿಓಪಿ ಗಣಪತಿ ಮೂರ್ತಿಗಳನ್ನು ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ಬಾವಿಯಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತವಾಗುತ್ತದೆ. ಹೆಚ್ಚಿನ ಮಾಲಿನ್ಯವಾದಾಗ ಜಲಚರಗಳು ಸಾಯುತ್ತವೆ. ಈ ನೀರನ್ನು ಕುಡಿಯುವ ಜಾನುವಾರು ಮತ್ತು ಜನರ ಆರೋಗ್ಯದ ಮೇಲೂ ತೀವ್ರ ದುಷ್ಪರಿಣಾಮ ಆಗುತ್ತದೆ. ಹೀಗಾಗಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net