ಇಸ್ರೋ ನಿಯಂತ್ರಣ ಕೇಂದ್ರಕ್ಕೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ

image-600x400-_4_
Published on

ಬೆಂಗಳೂರು: ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪೀಣ್ಯದಲ್ಲಿರುವ ಇಸ್ರೋ ನಿಯಂತ್ರಣ ಕೇಂದ್ರಕ್ಕೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಿದರು.

ಚಂದ್ರಯಾನ- 3ರ ಸಾಧನೆ, ಕಾರ್ಯನಿರ್ವಹಣೆ, ಮುಂದಿನ ಕಾರ್ಯಚಟುಟಿಕೆ ಬಗ್ಗೆ ವಿಜ್ಞಾನಿಗಳು ಸಿಎಂ ಬಳಿ ಮಾಹಿತಿ ಹಂಚಿಕೊಂಡರು.

ಈ ವೇಳೆ ಸಿಎಂ, ನಿಮ್ಮ ಪ್ರಯತ್ನ, ಶ್ರಮದಿಂದ ಇದೆಲ್ಲ ಸಾಧ್ಯವಾಗಿದ್ದು ನಾಡಿನ ಜನರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

ಬುಧವಾರ ಸಂಜೆ ಉಪ‌ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಸ್ರೋಗೆ ಭೇಟಿ ನೀಡಿ ಅಭಿನಂದಿಸಿದ್ದರು. ಆ.28 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net