

ಬೆಂಗಳೂರು: ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ನಗರದ ಡ್ರ್ರೈೂಟ್ಸ್ ಮತ್ತು ಆಹಾರ ಉತ್ಪಾದನಾ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳ ಪ್ರತ್ಯೇಕ ತಂಡಗಳು ನಗರದ ಹಲವು ಕಡೆ ದಾಳಿ ಮಾಡಿದ್ದಾರೆ.
ರಾಜಾಜಿನಗರದಲ್ಲಿರುವ ುಡ್ ಇಂಡಸ್ಟ್ರಿ, ಚಿಕ್ಕಪೇಟೆ ಮತ್ತು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರ್ರೈೂಟ್ಸ್ ವ್ಯಾಪಾರಿಗಳ ಅಂಗಡಿ ಮತ್ತು ನಿವಾಸಗಳ ಮೇಲೆ ಮತ್ತು ಇತರೆ ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.
ರಾಜಾಜಿನಗರದಲ್ಲಿರುವ ಪಿಎಸ್ ಆಗ್ರೋ ಫುಡ್ ಎಲ್ಎಲ್‌ಪಿ ಎಂಬ ಕಾರ್ಖಾನೆ ಮೇಲೆ ಹಾಗೂ ಚಿಕ್ಕಪೇಟೆಯ ಆರ್.ಟಿ ಸ್ಟ್ರೀಟ್‌ನಲ್ಲಿರುವ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ಹಾಗೂ ಅದರ ಮಾಲೀಕರ ನಿವಾಸದ ಮೇಲೆ ದಾಳಿ ನಡೆಸಿ ತಡರಾತ್ರಿವರೆಗೂ ಪರಿಶೀಲನೆ ನಡೆಸಿ ಮಹತ್ವವಾದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಫುಡ್ ಇಂಡಸ್ಟ್ರಿ ಮತ್ತು ಆಹಾರ ಉತ್ಪಾದನಾ ಘಟಕಗಳು ತೆರಿಗೆ ವಂಚನೆ ಮಾಡಿದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೈಗಾರಿಕೆ, ಡ್ರೈ ಪ್ರೂಟ್ಸ್ ಅಂಗಡಿಗಳು ಮತ್ತು ಅದರ ಮಾಲೀಕರ ನಿವಾಸದ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.
ಐಟಿ ಅಧಿಕಾರಿಗಳು ಇತ್ತೀಚೆಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಹಾಗೂ ಡ್ರ್ರೈೂಟ್ಸ್ ವ್ಯಾಪಾರಿಗಳ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ವ್ಯಾಪಾರಿಗಳಿಗೆ ಶಾಕ್ ನೀಡಿದೆ.