ಧರ್ಮದ ತಳಹದಿ ಮೇಲೆ ಬದುಕು ಕಟ್ಟಿಕೊಳ್ಳುವುದು ಶ್ರೇಷ್ಠ

22sunti02
ಸುಂಟಿಕೊಪ್ಪದ ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶ್ರೀ ಸದಾಶಿವ ಸ್ವಾಮೀಜಿ, ಪೂರ್ಣಿಮಾ ಪ್ರಭಾಕರ್, ಡಾ.ಶಶಿಕಾಂತ ರೈ, ಎಂ.ಎಸ್.ಸುರೇಶ್ ಚಂಗಪ್ಪ, ಕೆ.ಎಚ್.ಭಾರತಿ, ಕೆ.ಜಿ.ಶಿವನ್, ರವೀಶ್, ಎಂ.ರವೆಶ್ಶ್, ಎಂ.ಬಿ.ಕವಿತಾ ಇತರರಿದ್ದರು.
Published on

ಸುಂಟಿಕೊಪ್ಪ: ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆ ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಧಿಸಿದೆ ಎಂದು ಶ್ರೀ ಕ್ಷೇತ್ರ ಕೀರಿಕೊಡ್ಲಿ ಮಠದ ಕೊಡ್ಲಿಪೇಟೆ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಶುಕ್ರವಾರ ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಹಯೋಗದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮ ಸುಭಿಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಧಾರ್ಮಿಕ ಉಪನ್ಯಾಸ ನೀಡಿದರು.

ಜನರಿಂದ ಜನರಿಗಾಗಿ ಜನರಿಗೋಸ್ಕರ ಗ್ರಾಮಾಭಿವೃದ್ಧಿ ಯೋಜನೆ ರೂಪುಗೊಂಡಿದ್ದು, ಮಾನಸಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಜನರನ್ನು ಎಚ್ಚರಗೊಳಿಸಿ ಧರ್ಮದ ತಳಹದಿಯ ಮೇರೆ ಆರ್ಥಿಕ ಸಬಲೀಕರಣದ ಮೂಲಕ ಬದುಕನ್ನು ಕಟ್ಟಿಕೊಳ್ಳುವುದು ಶ್ರೇಷ್ಠ ಸಾಧನೆಯೆಂದು ಸ್ವಾಮೀಜಿ ಬಣ್ಣಿಸಿದರು.

ಕಂಬಿಬಾಣೆಯ ಕಮಲಾ ನೆಹರೂ ಮಹಿಳಾ ಮಂಡಳಿಯ ಅಧ್ಯಕ್ಷೆ ಪೂರ್ಣಿಮಾ ಪ್ರಭಾಕರ್ ಮಾತನಾಡಿ, ಮಹಿಳಾ ಅಭಿವೃದ್ಧಿ ದೇಶದ ಅಭಿವೃದ್ಧಿ ಎಂದು ಸ್ವಾಮಿ ವಿವೇಕಾನಂದರು ಹೇಳಿರುವುದು ಸತ್ಯವಾಗಿದೆ. ಮಹಿಳಾ ಸಬಲೀಕರಣದಿಂದ ನಾಲ್ಕು ಗೋಡೆಗಳ ನಡುವೆ ಅಡುಗೆ ಮನೆಗೆ ಸಿಮೀತವಾಗಿದ ಮಹಿಳೆಯರು ಹಣಕಾಸು ಮತ್ತು ಆಡಳಿತ ಕ್ಷೇತ್ರದಲ್ಲಿ ಪುರುಷರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಬೆರೆತಿದ್ದಾರೆ. ಯುವ ಜನಾಂಗ ಹೆಚ್ಚು ಉದ್ಯಮಶೀಲತೆಯತ್ತ ಮುಖಮಾಡಬೇಕೆಂದು ಅವರು ಕರೆ ನೀಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ವಿಚಾರಣೆಯ ಅಡಿಯಲ್ಲಿ ಹಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸುಂಟಿಕೊಪ್ಪ ಅಪರಾಧ ವಿಭಾಗದ ಉಪ ನಿರೀಕ್ಷಕಿ ಕೆ.ಎಚ್.ಭಾರತಿ, ತೊಂಡೂರು ಬಸವೇಶ್ವರ ದೇವಸ್ಥಾನದ ಕಾರ್ಯದರ್ಶಿ ಕೆ.ಜಿ.ಶಿವನ್, ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ರವೀಶ್, ಗುಡ್ಡೆಹೊಸೂರು ವಲಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಕೆ.ಎಂ.ರಮೇಶ್, ಮುಖ್ಯಶಿಕ್ಷಕಿ ಎಂ.ಬಿ.ಕವಿತಾ ಮಾತನಾಡಿದರು.

ಸೋಮವಾರಪೇಟೆ ತಾಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷ ಜೀವನ್ ಕುಮಾರ್, ಕುಂದುಮೊಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಕಾರ್ಯದರ್ಶಿ ಅರುಣ್ ಪೂಜಾರಿ, ನೇತಾಜಿ ಯುವಕ ಸಂಘದ ಅಧ್ಯಕ್ಷ ಎಂ.ಸಿ.ಪೂಣ್ಣಚ್ಚ, ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಹಾಗೂ ಸೇವಾ ಪ್ರತಿನಿಧಿಗಳಾದ ಹೇಮಾವತಿ, ಮೇಲ್ವಿಚಾರಕರಾದ ಕೆ.ಯತೀಶ್, ವಿವಿಧ ಒಕ್ಕೂಟಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net