ಅನುದಾನ ಹಂಚಿಕೆ ವಿಚಾರದಲ್ಲಿ ಉತ್ತಮ ವ್ಯವಸ್ಥೆ ರೂಪಿಸುವುದು ಅವಶ್ಯ: ಡಾ.ಪರಮೇಶ್ವರ|Grant allocation

ggp1
Published on

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಅತಿ ಹೆಚ್ಚು ಜಿಎಸ್‌ಟಿ ಕಟ್ಟುತ್ತಿದ್ದು, ಆ ಪ್ರಮಾಣಕ್ಕೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡಬೇಕು(It is necessary to make a good system in the matter of grant allocation) ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ(Dr G Parameswara)ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಕೊಡಬೇಕಾದ ಬಾಕಿ ಬಗ್ಗೆ ಉತ್ತಮ ವ್ಯವಸ್ಥೆ ರೂಪಿಸಿದರೆ ಅನ್ಯಾಯವಾಗುವುದು ತಪ್ಪುತ್ತದೆ ಎಂದರು.

ಅನೇಕ ಯೋಜನೆಗಳಿಗೆ ಕೇಂದ್ರ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಬೇಕಿದೆ. ಕೆಲವು ಯೋಜನೆಗಳಿಗೆ ೋಷಣೆ ಮಾಡಿಯೂ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ರಾಜ್ಯದ ಅನೇಕ ಯೋಜನೆಗಳ ಪ್ರಗತಿ ಕುಂಠಿತವಾಗುತ್ತದೆ. ಹಾಗಾಗಿ ಕೇಂದ್ರ ನಮ್ಮ ರಾಜ್ಯಕ್ಕೆ ನೀಡಬೇಕಾಗಿರುವ ೋಷಿತ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಸ್ಕಾಲರ್‌ಶಿಪ್ ಕೊಡುವುದು ಉತ್ತಮ

ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನಿಲ್ಲಿಸಿದೆ. ಅದನ್ನು ಮತ್ತೆ ಕೊಟ್ಟರೆ ಉತ್ತಮ. ಆ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇನ್ನೂ ಅನೇಕ ಯೋಜನೆಗಳು ಸಂಪೂರ್ಣ ಆಗಿಲ್ಲ. ಅವುಗಳಿಗೆ ಬರಬೇಕಾದ ಹಣ ಕೊಡಬೇಕು. ಅದಕ್ಕೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅವಕಾಶ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮೈಕ್ರೋ ಫೈನಾನ್ಸ್ ಗಂಭೀರ ಪರಿಗಣನೆ

ಮೈಕ್ರೋ ಫೈನಾನ್ಸ್ ಸಾಲ ವಸೂಲಿ ವಿಚಾರದಲ್ಲಿ ಅನೇಕ ಕಡೆ ಗಲಾಟೆ ಆಗಿವೆ. ಕೆಲವು ಆತ್ಮಹತ್ಯೆಗಳೂ ನಡೆದಿವೆ. ಹಾಗಾಗಿ ಈ ವಿಷಯವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಡಾ.ಪರಮೇಶ್ವರ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net