

ಬೆಂಗಳೂರು: ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ(It is not right to call for a ceasefire mediated by the US) ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(H D Kumaraswamy) ಹೇಳಿದ್ದಾರೆ.
ದೆಹಲಿಗೆ ಹೊರಡುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದರು.
ಪಹಲ್ಗಾಮ್ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ದೇಶದ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಆ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿವೆ. ನೆರೆ ದೇಶದ ಸೇನೆಯು ಉಗ್ರ ಪೋಷಣೆ ಮಾಡುತ್ತ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರ ಧೃಢ ನಾಯಕತ್ವ ಹಾಗೂ ನಮ್ಮ ಹೆಮ್ಮೆಯ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ಭಾರತದ ಎಲ್ಲ ಕಡೆ ಮೇಲುಗೈ ಸಾಧಿಸಿದೆ. ಪಾಕಿಸ್ತಾನಕ್ಕೆ ನಡುಕ ಉಂಟಾಗಿತ್ತು. ಉಗ್ರರ ಚಟುವಟಿಕೆಗಳಿಗೆ ಇತಿಶ್ರೀ ಹಾಡುವ ದೃಷ್ಟಿಯಿಂದ ಪ್ರಧಾನಿ ಅನೇಕ ಕ್ರಮಗಳನ್ನು ತೆಗೆದುಕೊಂಡದ್ದರು ಹಾಗೂ ಉಗ್ರರ ಶಿಬಿರಗಳ ಮೇಲೆ ನಮ್ಮ ಸೈನಿಕರು ದಾಳಿ ಮಾಡಿದ್ದರು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಅನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ. ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಒಪ್ಪಿಲ್ಲ. ಅದಕ್ಕೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಪ್ರಧಾನಿಗಳು ಕೂಡ ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರದ ಹಿತಾಸಕ್ತಿ ವಿಷಯದಲ್ಲಿ ಮೋದಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ದೇಶದ ಪ್ರತಿಷ್ಠೆಗೆ ಧಕ್ಕೆ ಬಾರದಂತೆ ಪ್ರಧಾನಿ ಮೋದಿ ಹಾಗೂ ಸೇನಾಪಡೆಗಳು ಕೈಗೊಂಡಿರುವ ನಿರ್ಧಾರಗಳನ್ನು ನಾವು ನೋಡಿದ್ದೇವೆ. ಉಗ್ರರಿಗೆ ಶಿಕ್ಷೆ ಕೊಡಬೇಕು ಎಂಬ ದೃಷ್ಟಿಯಿಂದ ನಮ್ಮ ಸೈನಿಕರು ದೇಶಕ್ಕೆ ಗೌರವ ತರುವ ಕೆಲಸ ಮಾಡಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪಾಕಿಸ್ತಾನ ಶರಣಾಗುವಂತೆ ಸೇನಾಪಡೆಗಳು ತಮ್ಮ ಪರಾಕ್ರಮ ಮೆರೆದಿವೆ.
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ