

ತೀರ್ಥಹಳ್ಳಿ: ಸಂಪರ್ಕ ಭಾಷೆಯಾಗಿ ಇಂಗ್ಲಿಷ್ ಅನಿವಾರ್ಯವಾಗಿದ್ದರೂ ಮಾತೃಭಾಷೆಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.
ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಸಂಸ್ಕೃತಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಂದು ದೇಶ ಸೂಪರ್ ಪವರ್ ಎನಿಸಿಕೊಳ್ಳುವುದು ಆ ನೆಲದ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆ ಮತ್ತು ಶಾಂತಿ-ನೆಮ್ಮದಿಯ ಬದುಕಿನಿಂದಾಗಿ ಎಂದು ತಿಳಿಸಿದರು.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದರು. ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ನಾಬಳ ಶಚ್ಚೀಂದ್ರ ಹೆಗ್ಡೆ, ತಹಸೀಲ್ದಾರ್ ಎಸ್.ರಂಜಿತ್ ಇತರರಿದ್ದರು.