

ಬೆಂಗಳೂರು: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಆಪ್ತ ಕನಕಪುರ ಕೆಂಪರಾಜು ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT) ಭಾನುವಾರ (ಏಪ್ರಿಲ್ 14) ಸಂಜೆ ದಾಳಿ ನಡೆಸಿದ್ದಾರೆ.
ಭಾನುವಾರ (ಏಪ್ರಿಲ್ 14) ನಗರದ ಕನಕಪುರ ರಸ್ತೆಯ ವಾಜರಹಳ್ಳಿ ಅಲ್ಲಿ ಇರುವ ಕೆಂಪರಾಜು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈವರೆಗೂ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ಎರಡು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳು ಕೆಂಪರಾಜು ಅವರ ಮನೆ ಮೇಲೆ ದಾಳಿ ನಡೆಸಿದ್ದು, ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರಿಗೆ ಅತ್ಯಾಪ್ತರಾಗಿರುವ ಕನಕಪುರದ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ಹೊಂದಿದ್ದಾರೆ.