ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ

Income tax
Published on

ಬೆಂಗಳೂರು: ಕ್ರಷರ್ ಮಾಲೀಕನ ಮನೆ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ಕೋಟ್ಯಂತರ ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಭಾನುವಾರ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ೧.೨೦ ಕೋಟಿ ರೂ.ನಗದು ಹಾಗೂ ೮೦೦ ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್ ಎಂಬುವವರ ಅಳಿಯ ಆಗಿರುವ ಲೋಕೇಶ್, ಕೆಲದಿನಗಳ ಹಿಂದೆ ಗಡಿಭಾಗದ ಚೆಕ್‌ಪೋಸ್ಟ್‌ನಲ್ಲಿ ೧೦ ಲಕ್ಷ ರೂ.ಹಣದ ಜತೆ ಸಿಕ್ಕಿಬಿದ್ದಿದ್ದರು. ಈ ಹಿನ್ನೆಲೆ ಅನುಮಾನದಿಂದ ಐಟಿ ಇಲಾಖೆಯ ೬ ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net