It seems Darshan is not being operated by BP

Darshan
Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣ ಆರೋಪಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರೂ ಇದುವರೆಗೂ ಶಸಚಿಕಿತ್ಸೆ ಮಾಡಿಸಿಕೊಂಡಿಲ್ಲ. ದರ್ಶನ್‌ಗೆ ಇರುವ ರಕ್ತದೊತ್ತಡ (ಬಿ.ಪಿ) ಸಮಸ್ಯೆಯೇ ಇದಕ್ಕೆ ಕಾರಣ ಎನ್ನಲಾಗಿದೆ.

ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವೈದ್ಯಕೀಯ ವರದಿ ಸಲ್ಲಿಸಲಾಗಿದ್ದು ಅದರಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ದರ್ಶನ್‌ಗೆ ಶಸ್ತ್ರ ಚಿಕಿತ್ಸೆ ಮಾಡುವುದಕ್ಕೆ ತಯಾರಿ ಮಾಡಲಾಗುತ್ತಿದೆ. ಆದರೆ ಅವರಿಗೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ. ಶಸಚಿಕಿತ್ಸೆ ಮಾಡಬೇಕು ಅಂದರೆ ಮನಷ್ಯನ ರಕ್ತದೊತ್ತಡ ಸಮತೋಲನ ಆಗಿರಬೇಕು. ದರ್ಶನ್ ರಕ್ತದೊತ್ತಡದ ಸಮತೋಲನವಾಗಿಲ್ಲ. ದರ್ಶನ್ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ. ಸದ್ಯ ಕನ್ಸರ್ವೇಟಿವ್ ಟ್ರೀಟ್ಮೆಂಟ್ ಮುಂದುವರಿದಿದೆ. ಪಿಸಿಯೋಥೆರಪಿ ಮತ್ತು ಔಷದಗಳಿಂದ ಸಮಸ್ಯೆ ನಿಯಂತ್ರಣದಲ್ಲಿ ಇಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶಸ ಚಿಕಿತ್ಸೆಗಾಗಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಆರೋಪಿ ಈವರೆಗೂ ಶಸ ಚಿಕಿತ್ಸೆ ಮಾಡಿಸಿಕೊಳ್ಳದೇ ಇರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net