Rain: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು

Bengaluru Rain
Published on

Rain:  ( Rain Alert ) ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು  ನಿನ್ನೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅಂತೆಯೇ ಈಗ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುತು ಮಳೆ ಶುರುವಾಗಿದೆ.

ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ. ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ತುಂತುರು ಮಳೆ ಶುರುವಾಗಿದೆ, ಮೋಡಕವಿದ ವಾತಾವರಣವಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net